Latest

ಆರೋಪ ಮಾಡುವ ಮೊದಲು ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ

ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ಕೊವಿಡ್ ಸಲಕರಣೆ ಖರೀದಿಯಲ್ಲಿ ರಾಜ್ಯ ಸರ್ಕಾರದಿಂದ ಕೊಟ್ಯಂತರ ರೂ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟಿಲ್, ಸಿದ್ದರಾಮಯ್ಯ ತಮ್ಮ ಮುಖವನ್ನು ಒಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಲಿ ಎಂದು ಗುಡುಗಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ನಳಿನ್ ಕುಮಾರ್, ಸಿದ್ದರಾಮಯ್ಯ ಬೇರೆಯವರ ಬಗ್ಗೆ ಮಾತನಾಡುವ ಮೊದಲು ತಮ್ಮ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ ಎಂದರು. ಸಿದ್ದರಾಮಯ್ಯ ಸರ್ಕಾರ ಇದ್ದಾಗ ಇಂದಿರಾ ಕ್ಯಾಂಟಿನ್ ಹೆಸರಿನಲ್ಲಿ ಎಷ್ಟು ಅವ್ಯವಹಾರ ನಡೆಸಿದರು ಎನ್ನೋದು ಗೊತ್ತಿದೆ. ಮೊದಲು ಅದರ ಲೆಕ್ಕವನ್ನು ಕೊಡಲಿ. ಈಶ್ವರ ಕಂಡ್ರೆ ಅವರು ಮನೆ ನಿರ್ಮಿಸುವಾಗ ಎಷ್ಟು ಲೂಟಿ ಹೊಡೆದರು ಎನ್ನೋದು ಗೊತ್ತಿದೆ. ಅದೆಲ್ಲವನ್ನೂ ಮೊದಲು ರಾಜ್ಯದ ಜನತೆ ಮುಂದಿಡಲಿ. ಆ ಮೇಲೆ ರಾಜ್ಯ ಬಿಜೆಪಿ ಸರ್ಕಾರದ ಅವ್ಯವಹಾರದ ಬಗ್ಗೆ ಮಾತನಾಡಲಿ ಎಂದು ಆಗ್ರಹಿಸಿದರು.

Home add -Advt

ಅವ್ಯವಹಾರ ನಡೆದಿದ್ದರೆ ಅದರ ಬಗ್ಗೆ ದಾಖಲೆ ಕೊಡಿ ಎಂದು ಸಿಎಂ ಯಡಿಯೂರಪ್ಪ ಸಭೆಗೂ ಆಹ್ವಾನಿಸಿದರು. ಆದರೆ ಸಿದ್ದರಾಮಯ್ಯ ಮಾತ್ರ ಸಭೆಗೆ ಬರಲಿಲ್ಲ ಏಕೆ ಎಂದು ಪ್ರಶ್ನಿಸಿದರು.

Related Articles

Back to top button