Latest

ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಂದೆಯೊಬ್ಬ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಹೇಯ ಕೃತ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಆರೋಪಿಯನ್ನು ಅರಕೆರೆಯ ಸಾಮ್ರಾಟ್ ಲೇಔಟ್ ನಿವಾಸಿ ಅಲೆಗ್ಸಾಂಡರ್ ದಾಸ್ ಎಂದು ಗುರುತಿಸಲಾಗಿದೆ. ಆರೋಪಿ ತಂದೆ ಸಂತ್ರಸ್ತ ಯುವತಿಯ ಮಲತಂದೆ.

Related Articles

20 ವರ್ಷದ ಮಗಳಿಗೆ ಡ್ರಗ್ಸ್ ಮತ್ತು ಮದ್ಯವನ್ನು ಕೊಟ್ಟು ಪ್ರಜ್ಞೆ ತಪ್ಪಿಸಿ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದ. ಅಲ್ಲದೇ ಈ ಕೃತ್ಯಕ್ಕೆ ತಾಯಿಯೇ ಸಹಕರಿಸಿದ್ದಾಳೆ ಎಂಬುದು ಇನ್ನೊಂದು ಆಘಾತಕಾರಿ ಸಂಗತಿ.

ಕಾಲೇಜು ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಸದ್ಯಕ್ಕೆ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ತಾಯಿ ನನಗೆ ಆಹಾರ ಪದಾರ್ಥದಲ್ಲಿ ನಿದ್ರೆ ಮಾತ್ರೆ ಬೆರೆಸಿ ಕೊಡುತ್ತಿದ್ದರು. ಅದನ್ನು ತಿಂದು ನನಗೆ ಪ್ರಜ್ಞೆ ತಪ್ಪುತ್ತಿತ್ತು. ಆಗ ಮಲತಂದೆ ನನ್ನ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಒಂದು ವರ್ಷದ ಹಿಂದೆ ಮಲತಂದೆ ಕೆಲಸದ ನಿಮಿತ್ತ ನನ್ನನ್ನು ಹೈದರಾಬಾದ್‍ಗೆ ಕರೆದುಕೊಂಡು ಹೋಗಿದ್ದನು. ಈ ವೇಳೆ ಹೋಟೆಲ್‍ನಲ್ಲಿ ಉಳಿದುಕೊಂಡಿದ್ದೆವು. ಆಗ ನನಗೆ ಬಲವಂತವಾಗಿ ಮದ್ಯ ಕುಡಿಸಿದ್ದನು. ನಾನು ಪ್ರಜ್ಞೆ ತಪ್ಪಿದ ನಂತರ ಅತ್ಯಾಚಾರ ಎಸಗಿದ್ದಾನೆ. ಬೆಳಗ್ಗೆ ಎಚ್ಚರಗೊಂಡಾಗ ಬಟ್ಟೆ ಇರುತ್ತಿರಲಿಲ್ಲ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಸಂತ್ರಸ್ತೆ ತಾಯಿ ಹಲವು ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದಿದ್ದಳು. ನಂತರ ಆರೋಪಿ ಅಲೆಗ್ಸಾಂಡರ್ ಜೊತೆ ಎರಡನೇ ಮದುವೆ ಮಾಡಿಕೊಂಡಿದ್ದಾಳೆ. ಆರೋಪಿ ನಿರ್ಮಾಣ ಕಂಪನಿಯ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದನು. ಸಂತ್ರಸ್ತೆ ತಾಯಿ ಮತ್ತು ಆರೋಪಿ ತಂದೆಯ ಜೊತೆ ಅರಕೆರೆಯಲ್ಲಿ ಬಾಡಿಯ ಮನೆಯಲ್ಲಿ ವಾಸ ಮಾಡುತ್ತಿದ್ದು, ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಕಾಲೇಜಿಗೆ ಹೋಗುವುದನ್ನು ನಿಲ್ಲಿಸಿ ಮಾಡೆಲಿಂಗ್ ಮಾಡು, ನಗ್ನ ಫೋಟೋಗಳ್ನು ತೆಗೆಸಿಕೊಂಡು ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸುವಂತೆ ಒತ್ತಾಯಿಸಿದ್ದಾನೆ. ಜೊತೆಗೆ ಪ್ರತಿದಿನ ಮಾದಕ ವಸ್ತು ಮತ್ತು ಮದ್ಯ ಸೇವನೆ ಮಾಡುವಂತೆ ಮಲತಂದೆ ಪೀಡಿಸಿದ್ದಾನೆ. ಅನೇಕ ಬಾರಿ ನನಗೆ ತಿಳಿಯದಂತೆ ಆಹಾರ ಪದಾರ್ಥದಲ್ಲಿ ಮಾದಕ ವಸ್ತು ಬೆರೆಸಿ ನೀಡಿದ್ದಾನೆ. ಈ ಕೃತ್ಯಕ್ಕೆ ತಾಯಿಯೂ ಸಹಕರಿಸಿದ್ದಾರೆ. ಇದೇ ರೀತಿ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ. ನಾನು ಪ್ರಶ್ನೆ ಮಾಡಿದರೆ, ನನ್ನ ಮೊಬೈಲ್ ಫೋನ್ ಕಿತ್ತುಕೊಂಡು ಕಾಲೇಜಿಗೆ ಹೋಗಬೇಡ ಎನ್ನುತ್ತಿದ್ದರು. ಬೇರೆ ಯಾರಿಗಾದರೂ ಈ ಬಗ್ಗೆ ಹೇಳಿದರೆ ನಾನು ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದರು. ಈ ಕೃತ್ಯಗಳಿಂದ ನೊಂದು ನಾನು ಮನೆ ಬಿಟ್ಟು ಹೋಗಿದ್ದು, ನನಗೆ ಜೀವ ಭಯವಿದೆ. ನನಗೆ ರಕ್ಷಣೆ ಕೊಡಿ ಎಂದು ಸಂತ್ರಸ್ತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾಳೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button