ಪ್ರಗತಿವಾಹಿನಿ ಸುದ್ದಿ; ಜೈಪುರ: ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಶುರುವಾಗಿದ್ದು, ಒಂದು ಕಡೆ ಬಿಜೆಪಿ ನಮ್ಮ ಶಾಸಕರನ್ನು ಸೆಳೆಯುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪ ಮಾಡಿದರೆ, ಮತ್ತೊಂದೆಡೆ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಬೆಂಬಲಿತ ಶಾಸಕರೊಂದಿಗೆ ದೆಹಲಿಗೆ ತೆರಳಿದ್ದಾರೆ.
ಸಚಿನ್ ಪೈಲಟ್ ತಮ್ಮ ಆಪ್ತ ಶಾಸಕರು ಹಾಗೂ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರನ್ನು ಭೇಟಿ ಮಾಡಿದ್ದರು. ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದ ಬೆನ್ನಲ್ಲೇ ಸಚಿನ್ ಪೈಲಟ್ ತಮ್ಮ ಬೆಂಬಲಿಗರೊಂದಿಗೆ ಇಂದು ದೆಹಲಿಗೆ ತೆರಳಿದ್ದಾರೆ. ಇಂದು ಅವರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಅಹ್ಮದ್ ಪಟೇಲ್ ಜೊತೆಗಿನ ಸಭೆಯಲ್ಲಿ ಅಶೋಕ್ ಗೆಹ್ಲೋಟ್ ವಿರುದ್ಧ ಸಚಿನ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಅಶೋಕ್ ಅವರು ನನ್ನನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿದ್ದಾರೆ. ನನಗೆ ಅನ್ಯಾಯ ಆಗುವುದನ್ನು ಎಂದಿಗೂ ಸಹಿಸೆನು ಎಂದು ಸಚಿನ್ ಆರೋಪಿಸಿದ್ದಾರೆ ಎನ್ನಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ