Latest

ಧಾರವಾಡದಲ್ಲಿ 129 ಸೇರಿ ಇಂದು 2627 ಜನರಿಗೆ ಕೊರೋನಾ ಸೋಂಕು, 71 ಜನರ ಸಾವು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು 2627 ಜನರಿಗೆ ಕೊರೋನಾ ಸೋಂಕು ತಗುಲಿದೆ. 71 ಜನರು ಸಾವಿಗೀಡಾಗಿದ್ದಾರೆ.

ಇಂದು ಬೆಂಗಳೂರಿನಲ್ಲಿ 1525 ಜನರಿಗೆ ಸೋಂಕು ದೃಢಪಟ್ಟಿದೆ. 45 ಜನರು ಸಾವಿಗೀಡಾಗಿದ್ದಾರೆ.

Home add -Advt

ದಕ್ಷಿಣ ಕನ್ನಡದಲ್ಲಿ ಇಂದು 196 ಜನರಿಗೆ ಸೋಂಕು ಪತ್ತೆಯಾಗಿದ್ದು, ಐವರು ಸಾವಿಗೀಡಾಗಿದ್ದಾರೆ. ಧಾರವಾಡದಲ್ಲಿ ದಾಖಲೆಯ 129 ಜನರಿಗೆ ಸೋಂಕು ದೃಢಪಟ್ಟಿದೆ.

ಯಾದಗಿರಿ 120, ಕಲಬುರಗಿ 79, ಬಳ್ಳಾರಿ 63, ಬೀದರ್ 62, ರಾಯಚೂರು 48, ಉಡುಪಿ 43, ಮೈಸೂರು ಮತ್ತು ಶಿವಮೊಗ್ಗ 42, ಚಿಕ್ಕಬಳ್ಳಾಪುರ 39, ಹಾಸನ 31, ಕೊಪ್ಪಳ 27 ತುಮಕೂರು 26, ಕೋಲಾರ 24, ದಾವಣಗೆರೆ 20, ಬೆಂಗಳೂರು ಗ್ರಾಮೀಣ 19, ಕೊಡಗು 15, ಗದಗ 14, ಚಾಮರಾಜನಗರ 13, ಉತ್ತರ ಕನ್ನಡ, ಹಾವೇರಿ 12, ಚಿಕ್ಕಮಗಳೂರು 10, ಬಾಗಲಕೋಟೆ 7, ಮಂಡ್ಯ 4, ರಾಮನಗರ 3, ಬೆಳಗಾವಿ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

ಬೆಳಗಾವಿಯಲ್ಲಿ ಇಂದು ಮೂವರು ಕೊರೋನಾದಿಂದ ಸಾವಿಗೀಡಾಗಿದ್ದಾರೆ. ಈವರೆಗೆ ಒಟ್ಟೂ 12 ಜನರು ಜಿಲ್ಲೆಯಲ್ಲಿ ಸಾವಿಗೀಡಾಗಿದ್ದಾರೆ.

ಇಂದು ಬೆಳಗಾವಿಯ ಶಿವಬಸವನಗರದ 80 ವರ್,ದ ವೃದ್ದೆ, ಅಥಣಿಯ 62 ವರ್ಷದ ವ್ಯಕ್ತಿ ಮತ್ತು ಬೆಳಗಾವಿ ವಿಜಯನಗರದ 57 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ.

 

Related Articles

Back to top button