ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಪ್ರಸಕ್ತ ಸಾಲಿನಲ್ಲಿ 3,84,947 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಕೂಡ ವಿದ್ಯಾರ್ಥಿನಿಯರದ್ದೇ ಮೇಲುಗೈ ಸಾಧಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿದರು. ಕಲಾ ವಿಭಾಗ 47.27ರಷ್ಟು ವಿದ್ಯಾರ್ಥಿಗಳು ಪಾಸ್, ವಾಣಿಜ್ಯ ವಿಭಾಗದಲ್ಲಿ ಶೇ.65.52 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ, ವಿಜ್ನಾನ ವಿಭಾಗದಲ್ಲಿ ಶೇ.76.2 ರಷ್ಟು ವಿದ್ಯಾರ್ಥಿಗಳು ಪಾಸ್. ಈ ಬಾರಿ ಕೂಡ ಶೇ. 68ರಷ್ಟು ಬಾಲಕಿಯರೇ ಉತ್ತೀರ್ಣರಾಗಿದ್ದು, ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ ಎಂದರು.
ರಾಜ್ಯದ ಎರಡು ಜಿಲ್ಲೆಗಳಲ್ಲಿ ಶೇ.90.2ರಷ್ಟು ಫಲಿತಾಂಶ ಬಂದಿದ್ದು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನದಲ್ಲಿವೆ. ಕೊಡಗು ಎರಡನೇ ಸ್ಥಾನ – ಶೇ.81.53ರಷ್ಟು ಫಲಿತಾಂಶ, ಉತ್ತರ ಕನ್ನಡ ಮೂರನೇ ಸ್ಥಾನ – ಶೇ.80.97ರಷ್ಟು ಫಲಿತಾಂಶ ಹಾಗೂ ಶೇ 54.2ರಷ್ಟು ಫಲಿತಾಂಶ ಪಡೆದಿರುವ ವಿಜಯಪುರ ಜಿಲ್ಲೆ ಕೊನೇ ಸ್ಥಾನದಲ್ಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ