Latest

ದೇಶದಲ್ಲಿ ಒಂದೇ ದಿನ 32,695 ಜನರಲ್ಲಿ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದೆ. ಪ್ರತಿ ನಾಲ್ಕು ದಿನಕ್ಕೆ 1 ಲಕ್ಷ ಜನರಿಗೆ ಮಾರಣಾಂತಿಕ ಸೋಂಕು ಹರಡುತ್ತಿದೆ. ಇದೇ ಮೊದಲ ಬಾರಿಗೆ ದೇಶದಲ್ಲಿ ದಿನವೊಂದರಲ್ಲಿ 32 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ಇದೀಗ ಈಗ ಒಂದೇ ದಿನ ಮೂರು ಸಾವಿರ ಪ್ರಕರಣಗಳು ಅಧಿಕಗೊಂಡು‌ ಜುಲೈ 15ರಂದು 32 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಬುಧವಾರ 32,695 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 9,68,876ಕ್ಕೆ ಏರಿಕೆಯಾಗಿದೆ.

Home add -Advt

ಕಳೆದ 24ಗಂಟೆಯಲ್ಲಿ 606 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 24,915ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 6,12,815 ಜನ ಮಾತ್ರ. ದೇಶದಲ್ಲಿ ಇನ್ನೂ 3,31,146 ಜನರಲ್ಲಿ ಕೊರೋನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

Related Articles

Back to top button