Latest

ಬೆಂಗಳೂರಿನಲ್ಲಿ ಕೊರೊನಾಗೆ ಮೊದಲ ಅಧಿಕಾರಿ ತಲೆದಂಡ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾಗೆ ಮೊದಲ ಅಧಿಕಾರಿಯ ತಲೆದಂಡವಾಗಿದೆ. ಬಿಬಿಎಂಪಿ ಆಯುಕ್ತ ಅನೀಲ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಕೂಡ ಬಿಬಿಎಂಪಿ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ಕಾರ್ಯನಿರ್ವಹಿಸಿದ್ದರು. ಕೋವಿಡ್-19 ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯ ಆರೋಪದ ಹಿನ್ನೆಲೆಯಲ್ಲಿ ಆಯುಕ್ತ ಸ್ಥಾನದಿಂದ ಅನಿಲ್ ಕುಮಾರ್ ಗೆ ಕೊಕ್ ನೀಡಲಾಗಿದೆ.

ಕೊರೊನಾ ಪರಿಸ್ಥಿತಿ ನಿಯಂತ್ರಿಸುವಲ್ಲಿ ಅನಿಲ್​ ಕುಮಾರ್ ಅವರು ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಹೈಕೋರ್ಟ್‌ ಕೂಡ ಬಿಬಿಎಂಪಿ ಕಾರ್ಯ ವೈಖರಿಗೆ ಚಾಟಿ ಬೀಸಿತ್ತು. ಈ ಕಾರಣಕ್ಕೆ ಅನಿಲ್ ಕುಮಾರ್ ಅವರನ್ನು ಆ ಸ್ಥಾನದಿಂದ ಎತ್ತಂಗಡಿ ಮಾಡಬೇಕು ಎಂಬ ಮಾತು ಕೇಳಿ ಬಂದಿತ್ತು. ಅಂತಿಮವಾಗಿ ಅನಿಲ್ ಕುಮಾರ್ ಅವರನ್ನು ಆಯುಕ್ತ ಸ್ಥಾನದಿಂದ ವರ್ಗಾವಣೆ ಮಾಡಿ ಸಾರ್ವಜನಿಕ ಉದ್ದಿಮೆ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button