ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ವೈರಸ್ ತೀವ್ರ ಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿ, ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ, ಶಾಸಕ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.
ಹೋಬಳಿ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಬೇಕು. ಎಲ್ಲ ತಾಲೂಕು ಆಸ್ಪತ್ರೆಗಳನ್ನು ಕೋವಿಡ್ ಹೆೆಲ್ತ್ ಸೆಂಟರ್ ಗಳನ್ನಾಗಿ ಪರಿವರ್ತಿಸಿ, ಅಗತ್ಯ ಸಿಬ್ಬಂದಿ ಹಾಗೂ ಸಾಮಗ್ರಿಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿದ್ದಾರೆ.
ಚಿಕ್ಕೋಡಿ ಮತ್ತು ಗೋಕಾಕಲ್ಲಿ ಟೆಸ್ಟಿಂಗ್ ಲ್ಯಾಬ್ ಆರಂಭಿಸಬೇಕು. ಪ್ರತಿ ತಾಲೂಕಿಗೆ ಎರಡು ಅಂಬುಲೆನ್ಸ್ ಗಳನ್ನು ಪೂರೈಸಬೇಕು. ಸರಕಾರಿ ವಾಹನ ಕೊರತೆ ಇದ್ದಲ್ಲಿ ಖಾಸಗಿ ವಾಹನ ಪೂರೈಸಬೇಕು. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಕೊರತೆ ಇದ್ದು ಕೂಡಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ