Kannada NewsKarnataka NewsLatest

ರಸ್ತೆ ಸಂಚಾರ ಬಂದ್!

ಪ್ರಗತಿವಾಹಿನಿ ಸುದ್ದಿ, ಉಗರಗೋಳ(ತಾ.ಸವದತ್ತಿ) – ಸೋಮವಾರ ಸಂಜೆ ೨ ತಾಸಿಗೂ ಅಧಿಕ ಕಾಲ ಸುರಿದ ಭಾರಿ ಮಳೆಯಿಂದಾಗಿ ಗ್ರಾಮದ ಹೆಗ್ಗೊಳ್ಳ ತುಂಬಿ ರಸ್ತೆಯಲ್ಲಿ ಹರಿಯುತ್ತಿದ್ದು, ಉಗರಗೋಳ-ಯಲ್ಲಮ್ಮನಗುಡ್ಡ ಮಾರ್ಗದ ರಸ್ತೆಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ವಾಹನ ಸವಾರರು ಪರದಾಡಿದರು.

ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡ-ಉಗರಗೋಳ ಮಾರ್ಗದ ರಸ್ತೆ ಸಂಚಾರ ಸ್ಥಗಿತಗೊಂಡಿರುವುದು.

ಮತ್ತೊಂದೆಡೆ, ಭಾರಿ ಮಳೆಯಿಂದಾಗಿ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಸುತ್ತಲಿನಲ್ಲಿರುವ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದ ಬಳಿ ಇರುವ ಕೊಳ್ಳದಲ್ಲಿ ಅಪಾರ ಪ್ರಮಾಣದ ನೀರು ಧುಮ್ಮಿಕ್ಕುತ್ತಿದೆ. ಜೋಗುಳಬಾವಿ ಬಳಿ ಇರುವ ದಬದಬೆ ಜಲಪಾತವೂ ತುಂಬಿ ಹರಿಯುತ್ತಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button