
ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಪುತ್ತಿಗೆ ಮಠಾಧೀಶರಾಗಿರುವ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಕೊರೊನಾ ಪಾಸಿಟೀವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಪುತ್ತಿಗೆ ಶ್ರೀಗಳು ಮಣಿಪಾಲ ಕೆಎಂಸಿಗೆ ಭೇಟಿ ನೀಡಿ ಕೊವಿಡ್ ಟೆಸ್ಟ್ ಮಾಡಿಸಿಕೊಂಡಿದ್ದರು. ಈ ವೇಳೆ ಪಾಸಿಟಿವ್ ಇರುವುದು ಬೆಳಕಿಗೆ ಬಂದಿದೆ. ಈ ಹಿನ್ನಲೆಯಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಡುಪಿ ಮೂಲ ಮಠದಲ್ಲಿದ್ದ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾತುರ್ಮಾಸ್ಯ ವ್ರತಾಚರಣೆಗೆ ಸಿದ್ಧತೆಗಳನ್ನು ನಡೆಸಿದ್ದರು. ಮಠದಲ್ಲಿ ನಡೆಯುವ ದೈನಂದಿನ ಓಡಾಟ, ಧಾರ್ಮಿಕ ಚಟುವಟಿಕೆ, ಪೂಜೆ ಪುನಸ್ಕಾರದ ಸಂದರ್ಭ ಶ್ರೀಗಳಿಗೆ ಕೊರೊನಾ ಆವರಿಸಿರಬಹುದು ಎನ್ನಲಾಗಿದೆ.
ಸ್ವಾಮೀಜಿಯ ಜೊತೆಗಿದ್ದವರನ್ನು ಕ್ವಾರಂಟೈನ್ ಮಾಡಲು ಉಡುಪಿ ಜಿಲ್ಲಾ ವೈದ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ