Latest

ರಾಮ ಮಂದಿರ ಶಿಲನ್ಯಾಸಕ್ಕೆ ತಡೆ ನೀಡಿ

ಪ್ರಗತಿವಾಹಿನಿ ಸುದ್ದಿ; ಅಲಹಾಬಾದ್‌: ಐತಿಹಾಸಿಕ ರಾಮ ಮಂದಿರ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಸಿದ್ಧತೆಗಳು ಆರಂಭವಾಗಿವೆ. ಆಗಸ್ಟ್ 5ರಂದು ಪ್ರಧಾನಿ ಮೋದಿ ಶಿಲನ್ಯಾಸ ನೆರವೇರಿಸಲಿದ್ದಾರೆ. ಈ ಶಿಲನ್ಯಾಸ ಕಾರ್ಯಕ್ರಮಕ್ಕೆ ತಡೆ ನೀಡುವಂತೆ ಅಲಹಾಬಾದ್ ಹೈಕೋರ್ಟ್ ನಲ್ಲಿ ದೂರು ದಾಖಲಾಗಿದೆ.

ಆಗಸ್ಟ್ 05 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.10 ರ ನಡುವೆ ಪ್ರಧಾನಿ ಮೋದಿ ಶಿಲನ್ಯಾಸ ನೆರವೇರಿಸಲಿದ್ದಾರೆ. ಆಗಸ್ಟ್ 5ರಂದು ನಡೆಯುವ ಈ ಶಿಲಾನ್ಯಾಸಕ್ಕೆ ತಡೆ ನೀಡುವಂತೆ ದೆಹಲಿ ಮೂಲದ ಸಾಕೇತ್ ಗೋಖಲೆ ಎಂಬುವವರು ದೂರು ದಾಖಲಿಸಿದ್ದಾರೆ. ಶಿಲಾನ್ಯಾಸ ಕೋವಿಡ್ -19 ರ ಅನ್ಲಾಕ್ -2 ರ ಮಾರ್ಗಸೂಚಿಯ ಉಲ್ಲಂಘನೆಯಾಗಿದೆ. ಭೂಮಿ ಪೂಜೆಯಲ್ಲಿ ಮುನ್ನೂರು ಜನ ಸೇರುತ್ತಾರೆ ಇದು ಅನ್ಲಾಕ್ -2 ನಿಯಮಗಳಿಗೆ ವಿರುದ್ಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Related Articles

ಸಾಮಾಜಿಕ ಅಂತರದ ಕುರಿತು ಸರ್ಕಾರವೇ ಜನರಲ್ಲಿ ಅರಿವು ಮೂಡಿಸಿ ಹೀಗೆ ಸರ್ಕಾರವೇ ಅದನ್ನು ಉಲ್ಲಂಘನೆ ಮಾಡುವುದು ಸರಿಯಲ್ಲ. ಶೀಲಾನ್ಯಾಸದ ಹೆಸರಲ್ಲಿ ಜನ ಒಂದುಕಡೆ ಸೇರಿದರೆ ಅದರಿಂದ ಮುಂದೆ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಭೂಮಿ ಪೂಜೆಗೆ ತಡೆ ನೀಡಿ ಎಂದು ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button