ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಜತೆ ಸಂಪರ್ಕದಲ್ಲಿದ್ದ ಅಧಿಕಾರಿಗಳಿಗೆ ಆತಂಕ ಶುರುವಾಗಿದೆ.
ಈ ಬಗ್ಗೆ ಸ್ವತ: ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ತಮಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು ಬಳಿಕ ಕೊರೊನಾ ಪರೀಕ್ಷೆ ಮಾಡಿಸಿದಾಗ ಕೊವಿಡ್ ಪಾಸಿಟಿವ್ ಬಂದಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪಾಲಿಸುತ್ತಿರುವುದಾಗಿ ಅವರು ಹೇಳಿದ್ದಾರೆ.
ತಮ್ಮೊಂದಿಗೆ ಕಳೆದ ಹತ್ತು ದಿನಗಳಿಂದ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿ, ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದಾರೆ. ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ಸಿಎಂ ಶಿವರಾಜ್ ಸಿಂಗ್ ಅವರನ್ನು ಭೋಪಾಲ್ ನ ಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ