Latest

14 ಲಕ್ಷ ಗಡಿ ಸಮೀಪಿಸಿದ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 48,661‌ ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 13,85,522ಕ್ಕೆ ಏರಿಕೆಯಾಗಿದೆ.

ಶನಿವಾರ 705 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 32 ಸಾವಿರದ ಗಡಿ‌ ದಾಟಿದ್ದು, 32,063ಕ್ಕೆ ಏರಿಕೆಯಾಗಿದೆ.

Home add -Advt

ಈವರೆಗೆ ಕೊರೋನಾದಿಂದ ಗುಣಮುಖರಾದವರು 8,85,577 ಜನ ಮಾತ್ರ. ದೇಶದಲ್ಲಿ ಇನ್ನೂ 4,67,882 ಜನರಲ್ಲಿ ಕೊರೋನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಒಂದೆಡೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆಯೂ ಗುಣಮುಖರಾಗುತ್ತಿರುವ ಪ್ರಮಾಣವೂ ದಿನದಿಂದ ದಿನಕ್ಕೆ ವೃದ್ಧಿಸುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ.

Related Articles

Back to top button