ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಕಂಬಿ ಶುಕ್ರವಾರ ಸೇವಾ ನಿವೃತ್ತಿ ಹೊಂದಲಿದ್ದಾರೆ.
30 ವರ್ಷದ 1 ತಿಂಗಳ ಸರಕಾರಿ ಸೇವೆಯಿಂದ ಅವರು ವಿಶ್ರಾಂತ ಜೀವನಕ್ಕೆ ತೆರಳಲಿದ್ದಾರೆ. ಸಧ್ಯ ಅವರು ಬೆಂಗಳೂರಿನಲ್ಲಿ ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಬಸವರಾಜ ಕಂಬಿ ಬೆಳಗಾವಿಯಲ್ಲಿ 17 ವರ್ಷ ವಾರ್ತಾ ಇಲಾಖೆ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದಾರೆ. ಮೂಲತಃ ಧಾರವಾಡದವರಾದ ಅವರು, ತಮ್ಮ ವಿಶ್ರಾಂತ ಜೀವನವನ್ನು ಧಾರವಾಡದಲ್ಲೇ ಕಳೆಯಲು ನಿರ್ಧರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ