Latest
ಆತ್ಮಹತ್ಯೆಗೆ ಶರಣಾದ ಪಿಎಸ್ ಐ

ಪ್ರಗತಿವಾಹಿನಿ ಸುದ್ದಿ; ಹಾಸನ: ಪಿಎಸ್ಐ ಒಬ್ಬರು ತಮ್ಮ ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ಸಬ್ ಇನ್ಸ್ಪೇಕ್ಟರ್ ಕಿರಣ್ ಎಂದು ಗುರುತಿಸಲಾಗಿದೆ. ಕಿರಣ್ ಚನ್ನರಾಯಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ತಮ್ಮ ಮನೆಯಲ್ಲಿಯೇ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.




