ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಜಿಲ್ಲಾ ಗ್ರಾಹಕ ನ್ಯಾಯಾಲಯಕ್ಕೆ ಭೇಟಿ ನೀಡಿದ ಶಾಸಕ ಅನಿಲ ಬೆನಕೆ ಅಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ಭರವಸೆನೀಡಿದರು.
ಬೆಳಗಾವಿ ಜಿಲ್ಲಾ ಗ್ರಾಹಕರ ಸಂಘದ ಅಧ್ಯಕ್ಷ, ನ್ಯಾಯವಾದಿ ಎನ್.ಆರ್. ಲಾತೂರ ನ್ಯಾಯಾಲಯಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡುವಂತೆ ಮನವಿ ಸಲ್ಲಿಸಿದರು. ನ್ಯಾಯಾಲಯದಲ್ಲಿನ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಎಷ್ಟೆ ಮನವಿ ಮಾಡಿದರು ಉತ್ತರವಿಲ್ಲ ಎಂದು ಲಾತೂರ ತಿಳಿಸಿದರು.
ನ್ಯಾಯಾಲಯದಲ್ಲಿನ ಸಮಸ್ಯೆಗಳಾದ ಶೌಚಾಲಯ, ನ್ಯಾಯಾಲಯದ ಆವರಣದಲ್ಲಿ ಆಸನದ ವ್ಯವಸ್ಥೆ ಹಾಗೂ ಸಿಬ್ಬಂದಿ ಕೊರತೆಯನ್ನು ಆದಷ್ಟು ಬೇಗ ಬಗೆಹರಿಸಲಾಗುವುದು ಎಂದು ಬೆನಕೆ ಭರವಸೆ ನೀಡಿದರು.
ಬೆಳಗಾವಿ ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವುದರಿಂದ ಬೆಂಗಳೂರಿನಲ್ಲಿರುವ ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರದ ಆಯೋಗದ ಸಂಚಾರಿ ಪೀಠವನ್ನು ಹೆಚ್ಚುವರಿಯಾಗಿ ಬೆಳಗಾವಿಯಲ್ಲಿ ಸ್ಥಾಪಿಸುವ ಬಗ್ಗೆಯೂ ಪ್ರಯತ್ನಿಸಲಾಗುವುದು ಎಂದು ಶಾಸಕರು ಹೇಳಿದರು.
ನ್ಯಾಯವಾದಿ ಶ್ರೀರಂಗ ಕುಲಕರ್ಣಿ, ನ್ಯಾಯವಾದಿ ಲಕ್ಕೇಶ ಹೆಗ್ಗಣ್ಣವರ ಹಾಗೂ ಬೆಳಗಾವಿ ಜಿಲ್ಲಾ ಗ್ರಾಹಕರ ಸಂಘದ ಎಲ್ಲ ಸದಸ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ