
ಪ್ರಗತಿವಾಹಿನಿ ಸುದ್ದಿ; ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಕುಟುಂಬದವರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಕುರಿತು ಸ್ವತ: ಸಚಿವ ಪಾಟೀಲ್ ಮಾಹಿತಿ ನೀಡಿದ್ದಾರೆ. ಪತ್ನಿ, ಅಳಿಯ ಹಾಗೂ ಅವರ ನಿವಾಸದ ಸಿಬ್ಬಂದಿ ಸೇರಿ ಒಟ್ಟು ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡುವ ಮೂಲಕ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದು, ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗ ಸೇರಿದಂತೆ ಒಟ್ಟು ಐವರಿಗೆ ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದೆ. ಅವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮೆಲ್ಲರ ಹಾರೈಕೆಯೂ ಇರಲಿ ಎಂದು ಬರೆದುಕೊಂಡಿದ್ದಾರೆ.
ಹಾವೇರಿಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಿರೇಕೆರೂರು ತಾಲೂಕಿನಲ್ಲೇ ಒಟ್ಟು 101 ಜನರಿಗೆ ಕೊರೊನಾ ಸೋಂಕು ತಗುಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ