ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನೋಡ ನೋಡುತ್ತಿದ್ದಂತೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 57,117 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 16,95,988ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 764 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 36,511ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 10,94,374 ಜನ ಮಾತ್ರ. ದೇಶದಲ್ಲಿ ಇನ್ನೂ 5,65,103 ಜನರಲ್ಲಿ ಕೊರೊನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.
ಭಾರತದಲ್ಲಿ ಜುಲೈ 1ರಂದು 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ನಂತರದ ದಿನಗಳಲ್ಲಿ ಸೋಂಕಿನ ಸಂಖ್ಯೆ ಹೆಚ್ಚುತ್ತಲೇ ಇದ್ದು, ಜುಲೈ 10ರಂದು 27 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದವು. ಜುಲೈ 20ರಿಂದ 37 ಸಾವಿರಕ್ಕೂ ಪ್ರಕರಣಗಳು ಪತ್ತೆಯಾದವು ಈಗ ಜುಲೈ 31ಕ್ಕೆ 57,117 ಪ್ರಕರಣಗಳು ಕಂಡುಬಂದಿದ್ದು ದೇಶದ ಕೊರೊನಾ ಸೋಂಕಿತರ ಸಂಖ್ಯೆ 16,95,988ಕ್ಕೆ ಏರಿಕೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ