Latest

ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೊವಿಡ್ ಸೋಂಕಿತ ಮಹಿಳೆ

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ರಾಜ್ಯದಲ್ಲಿ ಇದೇ ಮೊದಲಬಾರಿಗೆ ಕೋವಿಡ್ ಸೋಂಕಿತ ಗರ್ಭಿಣಿ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿಯ ಡಾ.ರಾಜ್ ರಸ್ತೆಯಲ್ಲಿರುವ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ (ಕೋವಿಡ್ ಕೇರ್) ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿಯವರ ನೇತೃತ್ವದಲ್ಲಿ ಕೋವಿಡ್ ಸೋಂಕಿತ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ಸೋಂಕಿತ ಮಹಿಳೆ ಒಂದು ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಕೋವಿಡ್ ಸೋಂಕಿತ ಗರ್ಭಿಣಿಯು ಕಾರ್ಮಿಕ ವಲಯದಲ್ಲಿ ಕೆಲಸ ಮಾಡುತ್ತಿದ್ದು, ಎಲ್.ಎಸ್.ಸಿ.ಎಸ್ (Lower segment Caesarean section) ತಂತ್ರಜ್ಞಾನದ ಮೂಲಕ ತುರ್ತು ಹೆರಿಗೆ ಶಸ್ತ್ರಚಿಕಿತ್ಸೆಯನ್ನ ಮಾಡಲಾಗಿದೆ.

ನವಜಾತ ಹೆಣ್ಣು ಶಿಶು 1.8 ಕೆ.ಜಿಯಷ್ಟು ಹಾಗೂ ನವಜಾತ ಗಂಡು ಶಿಶು 2.5 ಕೆ.ಜಿ ಯಷ್ಟು ತೂಕವಿದೆ. ಮಹಿಳೆಗೆ ಇದು ಮೊದಲನೇಯ ಹೆರಿಗೆಯಾಗಿದ್ದು, ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಕೋವಿಡ್ ಸೋಂಕಿತ ಗರ್ಭಿಣಿ ಅವಳಿ-ಜವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎಂದು ಡಿ ಸಿ ನಕುಲ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button