ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಬಗ್ಗೆ ಆಕ್ಷೇಪಾರ್ಹ ಬರಹ ಬರೆದ ಕಾರಣಕ್ಕೆ ಕೆಪಿಸಿಸಿಯ ಸೋಷಿಯಲ್ ಮೀಡಿಯಾದ ಕಾರ್ಯದರ್ಶಿ ಆನಂದ್ ಪ್ರಸಾದ್ ಅವರನ್ನು ಬಂಧಿಸಲಾಗಿದೆ.
ಬೆಂಗಳೂರಿನ ಕೆಆರ್ ಪುರಂನಲ್ಲಿರುವ ಅವರ ನಿವಾಸದಲ್ಲಿ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಟ್ವಿಟ್ಟರ್ನಲ್ಲಿ ಆರ್.ಜೆ. ನವೀದ್ ಎಂಬುವರು ಅಮಿತ್ ಷಾಗೆ ಕೊರೋನಾ ಪಾಸಿಟಿವ್ ಬಂದಿರುವ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರು ಅಮಿತ್ ಷಾ ಬಗ್ಗೆ ಆಕ್ಷೇಪಾರ್ಹವಾಗಿ ಕಮೆಂಟ್ ಹಾಕಿದ್ದರು. ಈ ಸಂಬಂಧ ಆನಂದ್ ಪ್ರಸಾದ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಸಿಸಿ ಸೆಕ್ಷನ್ 505 (1)(b), 505(1) (C),153 ಅಡಿ ಎಫ್ಐಆರ್ ದಾಖಲಾಗಿತ್ತು. ಪ್ರಸ್ತಿತ ಟ್ವೀಟ್ ಡಿಲಿಟ್ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ