ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಚಿಕ್ಕೋಡಿ ತಾಲೂಕಿನಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆ ತೆರೆಯುವಂತೆ ಶಾಸಕ ಗಣೇಶ ಹುಕ್ಕೇರಿ ಸೂಚನೆ ನೀಡಿದ್ದಾರೆ.
ಬುಧವಾರ ತಾಲೂಕು ಮಟ್ಟದ ಅಧಿಕಾರಿಗಳ ವಿಶೇಷ ಸಭೆ ನಡೆಸಿದ ಗಣೇಶ ಹುಕ್ಕೇರಿ, ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಗಾಗಿ ಈ ಹಿಂದೆ ತೆರೆದಿರುವ ಕೋವಿಡ್ ಕೇರ್ ಸೆಂಟರ್ ಮಾದರಿಯಲ್ಲೇ ಕೋವಿಡ್ ಆಸ್ಪತ್ರೆ ಆರಂಭಿಸಬೇಕು. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸಬೇಕು. ಒಂದು ಕಡೆ ಪ್ರವಾಹದ ಆತಂಕವೂ ಇದ್ದು, ಇನ್ನೊಂದೆಡೆ ಕೊರೋನಾ ಭಯ ಕಾಡುತ್ತಿದೆ. ಹಾಗಾಗಿ ಎರಡನ್ನೂ ಎದುರಿಸಲು ತಾಲೂಕು ಆಡಳಿತ ಸನ್ನದ್ಧವಾಗಬೇಕು ಎಂದು ಅವರು ಹೇಳಿದರು.
ಯಾವುದೇ ಸಾಮಗ್ರಿ ಅಥವಾ ಸೌಲಭ್ಯ ಕೊರತೆ ಇದ್ದರೆ ಕೂಡಲೆ ತಿಳಿಸಬೇಕು. ಸರಕಾರದ ಮಟ್ಟದಲ್ಲಿ ಪ್ರಸ್ತಾವನೆ ಸಲ್ಲಿಸಲಾಗುವುದು. ಈ ವಿಷಯದಲ್ಲಿ ಯಾರೂ ನಿರ್ಲಕ್ಷ್ಯವಹಿಸುವುದು ಬೇಡ ಎಂದು ಎಚ್ಚರಿಸಿದರು.
ಸಭೆಯಲ್ಲಿ ತಾಲೂಕಾ ಅಧಿಕಾರಿಗಳು ಮತ್ತು ಐಎಂಎ ಅಧ್ಯಕ್ಷರು, ವೈದ್ಯರು ಭಾಗವಹಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ