Latest

ಎಸ್ ಎಸ್ ಎಲ್ ಸಿ ಫಲಿತಾಂಶ; ಸುರೇಶ್ ಕುಮಾರ್ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಗಸ್ಟ್ 6ರಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿ ಸುಳ್ಳು, ಎಸ್ ಎಸ್ ಎಲ್ ಸಿ ಫಲಿತಾಂಶ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟ ಪಡಿಸಿರುವ ಸಚಿವ ಸುರೇಶ್ ಕುಮಾರ್, ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು, ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ಹೇಳಿದರು.

ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚಿದ್ದರೂ ಭೀತಿ ನಡುವೆಯೂ ಸರ್ಕಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವ ಮೂಲಕ ಸಾಹಸ ಮಾಡಿದೆ. ವಿದ್ಯಾರ್ಥಿಗಳು ಸಹ ಅಷ್ಟೇ ಧೈರ್ಯವಾಗಿ ಪರೀಕ್ಷೆ ಎದುರಿಸಿ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಆದರೆ ಫಲಿತಾಂಶ ದಿನಾಂಕವನ್ನು ಇನ್ನೂ ಅಂತಿಮಪಡಿಸಿಲ್ಲ ಎಂದು ತಿಳಿಸಿದ್ದಾರೆ. ಈ ಹಿಂದೆ ಆಗಸ್ಟ್ ಮೊದಲ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವರು ತಿಳಿಸಿದ್ದರು. ಆದರೆ ಇದೀಗ ಫಲಿತಾಂಶದ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button