ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲಿ ವಿಧಾನ ಮಂಡಲ ಅಧಿವೇಶನವನ್ನು ಸುರಕ್ಷಿತವಾಗಿ ನಡೆಸುವುದು ಹೇಗೆ ಮತ್ತು ಎಲ್ಲಿ ನಡೆಸಬೇಕು ಎಂಬ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಕಳೆದ ಮಾರ್ಚ್‍ನಲ್ಲಿ ರಾಜ್ಯ ವಿಧಾನ ಸಭಾ ಅಧಿವೇಶನವು ನಡೆದಿದ್ದು, ಸಂವಿಧಾನಬದ್ದವಾಗಿ ಆರು ತಿಂಗಳ ಒಳಗೆ ಅಂದರೆ ಸೆಪ್ಟೆಂಬರ್ 23 ರೊಳಗೆ, ಮತ್ತೊಮ್ಮೆ ಸಮಾವೇಶ ನಡೆಸುವ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳ ಮಾಹಿತಿ ಆಧರಿಸಿ ಕಾನೂನು ಸಚಿವರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದು ಸ್ಪೀಕರ್ ಕಾಗೇರಿ ಹೇಳಿದ್ದಾರೆ.
ಇನ್ನು ಮುಂಜಾಗೃತಾ ಕ್ರಮವಾಗಿ ಕೊರೋನಾ ನಿಯಮಗಳ ಪಾಲನೆಗೆ ಕ್ರಮ ಕೈಗೊಳ್ಳುವ ಬಗ್ಗೆಯೂ ಚರ್ಚೆ ನಡೆದಿದೆ. ಸೆಪ್ಟೆಂಬರ್ನಲ್ಲಿ ಮುಂಗಾರು ಅಧಿವೇಶನ ನಡೆಸಲು ತಾಯಾರಿಯೂ ನಡೆದಿದೆ ಎನ್ನಲಾಗಿದೆ. ಸೆಪ್ಟೆಂಬರ್ನಲ್ಲಿ 10 ದಿನಗಳ ಅಧಿವೇಶನ ನಡೆಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ಸುಕರಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ