Latest

ಕೇಂದ್ರ ಸರ್ಕಾರ ವಿಶೇಷ ಆರ್ಥಿಕ ನೆರವು ನೀಡಬೇಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಕೊರೋನಾ ಅಟ್ಟಹಾಸ ಒಂದೆಡೆಯಾದರೆ ಇನ್ನೊಂದೆಡೆ ಅತಿವೃಷ್ಟಿಯಿಂದ ಜನತೆ ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ವಿಶೇಷ ಆರ್ಥಿಕ ನೆರವು ನೀಡಬೇಕು. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಅತಿವೃವೃಷ್ಟಿಯಿಂದ ಜನತೆ ಕಂಗಾಲು ಪಡುವಂತಾಗಿದೆ. ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಾಗಿದೆ ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ.

Related Articles

ಅತಿವೃಷ್ಟಿಯಿಂದ ಬಳಲುತ್ತಿರುವ ರಾಜ್ಯದ ಜನತೆಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬಹುತೇಕ ರಾಜ್ಯದೆಲ್ಲೆಡೆ ಬೆಳೆಗಳು ಹಾನಿಗೊಳಗಾಗಿದೆ ಜೊತೆಗೆ ಮನೆ-ಮಠ ಕಳೆದುಕೊಂಡವರಿಗೆ ಸರ್ಕಾರ ಕೂಡಲೇ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ಸಮಯದಲ್ಲಿ ಮುಖ್ಯಮಂತ್ರಿಗಳಿಗೆ ಕೊರೋನಾ ಸೋಂಕು ತಗುಲಿದೆ. ಅವರು ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಿಸಬೇಕಾದ ಸಂದರ್ಭ ಬಂದಿದೆ‌. ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳು ಮುಂಗಾರಿನ ಅಬ್ಬರದ ಭೀತಿಯಿಂದ ನಲುಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಮತ್ತು ಸಚಿವರುಗಳು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ ಎಂದು ಸಲಹೆ ನೀಡಿದ್ದಾರೆ.

Home add -Advt

Related Articles

Back to top button