Latest

ವಿದ್ಯಾರ್ಥಿಗಳ ಮೊಬೈಲ್ ಗೆ ಬರುತ್ತೆ ರಿಸಲ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಗಸ್ಟ್ 10ರಂದು ಮಧ್ಯಾಹ್ನ 3 ಗಂಟೆಗೆ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂತ ಪ್ರಕಟಗೊಳ್ಳಲಿದೆ. ಈ ಬಾರಿ ವಿದ್ಯಾರ್ಥಿಗಳ ಮೊಬೈಲ್​ಗೆ ಎಸ್.ಎಂ.ಎಸ್. ಮೂಲಕ ಫಲಿತಾಂಶ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಗುಂಪು ಗೂಡಬಾರದು ಎಂಬ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಮೊಬೈಲ್ ಗೆ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ವೆಬ್​ಸೈಟ್​ನಲ್ಲೂ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಒಳ್ಳೆಯ ಫಲಿತಾಂಶದ ನಿರೀಕ್ಷೆಯಿದೆ. ಅನುತ್ತೀರ್ಣರಾದವರು ಯಾರೂ ನಿರಾಶರಾಗುವುದು ಬೇಡ. ಜೀವನದಲ್ಲಿ ಇದೇ ಕೊನೇ ಅಲ್ಲ. ಇದೂ ಒಂದು ಭಾಗ ಅಷ್ಟೆ ಎಂದು ಹೇಳಿದರು.

ಕೊರೋನಾ ಭೀತಿಯಿಂದಾಗಿ ಸುಮಾರು 16 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಇವರೆಲ್ಲರನ್ನು ಸೆಪ್ಟಂಬರ್ ನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಹೊಸ ವಿದ್ಯಾರ್ಥಿಗಳಂತೆ ಪರಿಗಣಿಸಲಾಗುವುದು. ಅಂಕಪಟ್ಟಿಯಲ್ಲೂ ಸಹ ಅಟೆಂಪ್ಟ್ ಎಂದು ನಮೂದಿಸುವುದಿಲ್ಲ ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button