Latest

ಕೊವಿಡ್ ಕೇರ್ ಸೆಂಟರ್ ನಲ್ಲಿ 9 ಜನ ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ವಿಜಯವಾಡ: ಕೋವಿಡ್ ಕೇರ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 9 ಜನರು ಸಾವನ್ನಪ್ಪಿರುವ ಘಟನೆ ಆಂದ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.

ವಿಜಯವಾಡದ ಸ್ವರ್ಣ ಪ್ಯಾಲೇಸ್ ಹೋಟೆಲ್​ನ್ನು ತಾತ್ಕಾಲಿಕ ಕೊವಿಡ್ ಕೇರ್ ಸೆಂಟರ್ ಆಗಿ ಮಾಡಲಾಗಿದ್ದು, ಇಂದು ಬೆಳಗಿನ ಜಾವ 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 3 ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. 30 ಕೊರೊನಾ ಸೋಂಕಿತರು ಈ ಕೇರ್ ಸೆಂಟರ್ ನಲ್ಲಿ ದಾಖಲಾಗಿದ್ದರು.

ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು 20 ಮಂದಿಯನ್ನು ಘಟನಾ ಸ್ಥಳದಿಂದ ಪಾರು ಮಾಡಲಾಗಿದೆ. ಇನ್ನೂ ಹಲವರು ಈ ಹೋಟೆಲ್ ಕಟ್ಟಡದಲ್ಲಿ ಸಿಲುಕಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಕೇರ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಲು ಕಾರಣ ತಿಳಿದುಬಂದಿಲ್ಲ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button