ಪ್ರಗತಿವಾಹಿನಿ ಸುದ್ದಿ; ಕಾರವಾರ: ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾಗಿದ್ದರೂ ಕೂಡ ಸಮಾಜ ತನ್ನನ್ನು ತಾತ್ಸಾರ ಹಾಗೂ ಸಂಶಯದಿಂದ ನೋಡುತ್ತಿದೆ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರದಲ್ಲಿ ನಡೆದಿದೆ.
ಇಲ್ಲಿನ ಶಿರವಾಡದ ಹೆಳೆಕೋಟ್ ನಿವಾಸಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಒಂದು ತಿಂಗಳ ಹಿಂದೆ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಪಡದು ಗುಣಮುಖರಾಗಿ ಮನೆಗೆ ಬಂದಿದ್ದರು.
ಮನೆಗೆ ಬಂದ ವ್ಯಕ್ತಿಯನ್ನು ಗ್ರಾಮಸ್ಥರು ತಾತ್ಸಾರವಾಗಿ ನೋಡಲು ಆರಂಭಿಸಿದ್ದರು. ನೆರೆಹೊರೆಯವರ ವರ್ತನೆಯಿಂದ ನೊಂದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್‍ಐ ರೇವಣ ಸಿದ್ದಪ್ಪ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ