ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಮಳೆಯ ಅಬ್ಬರದ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗುತ್ತಿದ್ದು, ಒಂದೇ ದಿನ ದೇಶದಲ್ಲಿ 53,601 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22,68,676ಕ್ಕೇರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 871 ಸೋಂಕಿತರು ನಿಧನರಾಗಿದ್ದಾರೆ. 6,39,929 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ಕೊರೊನಾದಿಂದ 15,83,490 ಮಂದಿ ಗುಣಮಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 45,257 ಜನರು ಸಾವನ್ನಪ್ಪಿದ್ದಾರೆ.
ಮಾಹಾರಾಷ್ಟ್ರ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ತಮಿಳುನಾಡು ಎರಡನೇ ಸ್ಥಾನ, ಆಂಧ್ರ ಪ್ರದೇಶ ಮತ್ತು ಕರ್ನಾಟಕ ಮೂರು ಹಾಗೂ ನಾಲ್ಕನೇ ಸ್ಥಾನದಲ್ಲಿವೆ. ನೆರೆಯ ಮಹಾರಾಷ್ಟ್ರದಲ್ಲಿ ಸೋಮವಾರ 9,181 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,24,513ಕ್ಕೇರಿಕೆಯಾಗಿದೆ.
ಕೇಂದ್ರ ಸರ್ಕಾರದ ಮಾಹಿತಿ ಪ್ರಕಾರ ದೇಶದಲ್ಲಿ ಶೇ.28.21 ರಷ್ಟು ಮಾತ್ರ ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಗುಣಮುಖ ಪ್ರಮಾಣ ಶೇ.69.80 ಮತ್ತು ಮರಣ ದರ ಶೇ.1.99 ರಷ್ಟಿದೆ ಎಂದು ಹೇಳಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ