Latest

66,999 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಒಂದೇ ದಿನ 66,999 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 23,96.638ಕ್ಕೆ ಏರಿಕೆಯಾಗಿದೆ.

ಕಳೆದ 24ಗಂಟೆಯಲ್ಲಿ 942 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ 47,033ಕ್ಕೆ ತಲುಪಿದೆ. ಈ ಮೂಲಕ ಸಾವಿನ ಸಂಖ್ಯೆಯಲ್ಲಿ ಬ್ರಿಟನ್ (46,706)ನ್ನು ಭಾರತ ಹಿಂದಿಕ್ಕಿದ್ದು, ಅಮೆರಿಕಾ, ಬ್ರೆಜಿಲ್ ಹಾಗೂ ಮೆಕ್ಸಿಕೋ ಬಳಿಕ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.

Home add -Advt

ಸದ್ಯ 6,53,622 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 16,95,982 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 47,033 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಕಳೆದ 24ಗಂಟೆಗಳಲ್ಲಿ ದೇಶಾದ್ಯಂತ 8,30,391 ಜನರಲ್ಲಿ ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ 2,68,45,688 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾಹಿತಿ ನೀಡಿದೆ.

Related Articles

Back to top button