ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಸ್ವಾತಂತ್ರ್ಯ ದಿನಾಚರಣೆಯ ಒಂದು ದಿನದ ಮೊದಲು ಜಮ್ಮು-ಕಾಶ್ಮೀರ ಗಡಿಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಶ್ರೀನಗರದ ಹೊರವಲಯದಲ್ಲಿ ನಡೆದ ದಾಳಿಗೆ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ.
ಶ್ರೀನಗರದ ನೌಗಮ್ ನಲ್ಲಿ ಪೊಲೀಸ ಮೇಲೆ ದಾಳಿ ನಡೆದಿದ್ದು, ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಇಬ್ಬರು ಪೊಲೀಸರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ನೌಗಮ್ ಬೈಪಾಸ್ ಬಳಿ ಪೊಲೀಸ್ ಗಸ್ತಿನಲ್ಲಿದ್ದಾಗ ಭಯೋತ್ಪಾದಕರು ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿದ್ದಾರೆ. ಈ ವೇಳೆ 3 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಇಬ್ಬರು ಹುತಾತ್ಮರಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ರವಾನಿಸಲಾಗಿದೆ ಎಂದು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ