ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಕೇರಳದಲ್ಲಿ ಸಂಭವಿಸಿದ ವಿಮಾನ ದುರಂತದ ವೇಳೆ ರಕ್ಶಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ 22 ಅಧಿಕಾರಿಗಳಿಗೆ ಕೊರೊನಾ ಪಾಸಿಟೀವ್ ಬಂದಿದೆ ಎಂದು ಮಲಪ್ಪುರಂ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಆಗಸ್ಟ್ 7ರಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಕೇರಳದ ಕೋಯಿಕ್ಕೋಡ್‍ನ ಕರಿಪುರದಲ್ಲಿ ಲ್ಯಾಂಡಿಂಗ್ ವೇಳೆ ದುರಂತಕ್ಕೀಡಾಗಿತ್ತು. ಪರಿಣಾಮ ಇಬ್ಬರು ಪೈಲಟ್‍ಗಳು ಸೇರಿ 18 ಜನರು ಸಾವನ್ನಪ್ಪಿದ್ದರು.
ಕಂದಕಕ್ಕೆ ಬಿದ್ದಿದ್ದ ವಿಮಾನದಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹಲವು ಅಧಿಕಾರಿಗಳು ರಕ್ಷಣೆ ಮಾಡಿದ್ದರು. ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದ ಎಲ್ಲ ಅಧಿಕಾರಿಗಳನ್ನು ಕ್ವಾರಂಟೈನ್ ಮಾಡಲಾಗಿತ್ತು. ಈಗ ಇವರ ಪೈಕಿ 22 ಮಂದಿ ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೋಯಿಕ್ಕೋಡ್‍ನ ಕರಿಪುರದಲ್ಲಿ ಲ್ಯಾಂಡಿಗೆ ವೇಳೆ ರನ್ ವೇಯಲ್ಲಿ ಜಾರಿ ದುರಂತಕ್ಕೀಡಾಗಿತ್ತು. ವಿಮಾನದಲ್ಲಿ 184 ಮಂದಿ ಪ್ರಯಾಣಿಕರಲ್ಲಿ 10 ಮಂದಿ ಮಕ್ಕಳು, ಇಬ್ಬರು ಪೈಲಟ್‍ಗಳು ಹಾಗೂ ಐವರು ಕ್ಯಾಬಿನ್ ಸಿಬ್ಬಂದಿ ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ