Latest

ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು, ನಾಲಿಗೆ ಕತ್ತರಿಸಿದ ಪಾಪಿಗಳು

ಪ್ರಗತಿವಾಹಿನಿ ಸುದ್ದಿ; ಲಕ್ನೋ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ನಾಲಿಗೆ ಕತ್ತರಿಸಿ, ಕತ್ತು ಸೀಳಿ ಕೊಲೆಗೈದಿರುವ ಅಮಾನುಷ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಲಖಿಮಪುರ ಖೀರಿ ಜಿಲ್ಲೆಯಲ್ಲಿ 13 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ. ಬಾಲಕಿಯ ಶವ ಆರೋಪಿಗಳ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದ್ದು, ಮಗಳ ಕುತ್ತಿಗೆಯ ಕೊಯ್ದು ಕೊಲೆ ಮಾಡಲಾಗಿದೆ. ಆಕೆಯ ಕಣ್ಣುಗಳು ಹೊರಗಡೆ ಬಂದಿದ್ದವು, ನಾಲಿಗೆ ಕತ್ತರಿಸಲಾಗಿತ್ತು ಎಂದು ಬಾಲಕಿಯ ತಂದೆ ದೂರು ನೀಡಿದ್ದಾರೆ.

ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರೋದು ದೃಢವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಇಬ್ಬರನ್ನು ಬಂಧಿಸಲಾಗಿದೆ. ಕೊಲೆ, ಅತ್ಯಾಚಾರ ಸೇರಿದಂತೆ ಹಲವು ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Home add -Advt

Related Articles

Back to top button