Latest

ಕುಡಿದ ಮತ್ತಲ್ಲಿ ತಂದೆ-ಮಗನ ಜಗಳ; ಕೊಲೆಯಲ್ಲಿ ಅಂತ್ಯ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕುಡಿದ ಮತ್ತಿನಲ್ಲಿ ಮಗನೊಬ್ಬ ತಂದೆಯನ್ನೇ ಹತ್ಯೆಗೈದಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ತಿಂಗಳಾಡಿ ಗ್ರಾಮದ ಬಾಲಯ ಎಂಬಲ್ಲಿ ಈ ಘಟನೆ ನಡೆದಿದೆ. ಮೃತ ತಂದೆ ಗಂಗಾಧರ್ ನಾಯ್ಕ್ ಹಾಗೂ ತಂದೆಯನ್ನು ಹತ್ಯೆಗೈದ ಆರೋಪಿ ಮಗನನ್ನು ಶಶಿಧರ್ ನಾಯ್ಕ್ ಎಂದು ಗುರುತಿಸಲಾಗಿದೆ‌. ಕುಡಿತದ ಜತೆಗೆ ಶಶಿಧರ್ ಗೆ ಗಾಂಜಾ ಚಟ ಕೂಡ ಇತ್ತು ಎನ್ನಲಾಗಿದೆ.

ಕುಡಿದ ಮತ್ತಲ್ಲಿ ತಂದೆ ಹಾಗೂ ಮಗ ಇಬ್ಬರೂ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಮಗನ ಕೋಪದ ಕೈಗೆ ಮನೆಯಲ್ಲಿದ್ದ ಕತ್ತಿ ಸಿಕ್ಕಿದೆ. ವಾಗ್ವಾದಕ್ಕಿಳಿದ ತಂದೆಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ತಂದೆ ರಕ್ತದ ಮಡುವಲ್ಲಿ ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಸಂಪ್ಯ ಪೋಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related Articles

Back to top button