ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈಗಾಗಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ಮುಖಂಡರಿಗೂ ಕೊರೊನಾ ಸೋಂಕು ತಗುಲಿತ್ತು. ಎಲ್ಲರೂ ಸೂಕ್ತ ಚಿಕಿತ್ಸೆ ಮೂಲಕ ಗುಣಮುಖರಾಗಿದ್ದಾರೆ. ಇದೀಗ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೂ ಕೊವಿಡ್ ಪಾಸಿಟೀವ್ ಬಂದಿದೆ.
ಈ ಕುರಿತು ಸ್ವತ: ಜಮೀರ್ ಅಹ್ಮದ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಅಲ್ಲದೇ ಕಳೆದ ಕೆಲವು ದಿನಗಳಿಂದ ತಮ್ಮೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ