ಪ್ರಾದೇಶಿಕ ಕಚೇರಿ ಮಂಜೂರಿ ಬಗ್ಗೆ ಅಕಾಡೆಮಿಯ ಯಾವುದೇ ಅಧಿಕೃತ ಪತ್ರವಿಲ್ಲ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕೇಂದ್ರವನ್ನು ಬೆಳಗಾವಿಯಲ್ಲಿ ಆರಂಭಿಸಲಿದೆಯೇ?
ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಈ ಕುರಿತು ಉಲ್ಲೇಖಿಸಿದ್ದಾರೆ. ಆದರೆ ಅಕಾಡೆಮಿಯಿಂದ ಈ ಬಗ್ಗೆ ಯಾವುದೇ ಅಧಿಕೃತ ಪತ್ರ ಹೊರಬಿದ್ದಿಲ್ಲ.
ಬೆಳಗಾವಿಯಲ್ಲಿ ಕೇಂದ್ರ ಲಲಿತಕಲಾ ಅಕಾಡೆಮಿ ಕೇಂದ್ರ ಸ್ಥಾಪಿಸಲು ಅವಶ್ಯವಿರುವ ಕನಿಷ್ಠ 2 ಎಕರೆ ಜಮೀನನ್ನು ಮಂಜೂರು ಮಾಡುವಂತೆ ಸಿ.ಟಿ.ರವಿ ಜುಲೈ 31ರಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಆದರೆ, ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕೇಂದ್ರ ಆರಂಭಿಸಲು ಅಕಾಡೆಮಿ ಒಪ್ಪಿರುವ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಕೇವಲ ಸದಸ್ಯರೊಬ್ಬರು ಜಾಗ ಮಂಜೂರು ಮಾಡಲು ಮನವಿ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಪ್ರಾದೇಶಿಕ ಕಚೇರಿ ಮಂಜೂರಿ ಬಗ್ಗೆ ಅಕಾಡೆಮಿಯ ಯಾವುದೇ ಅಧಿಕೃತ ಪತ್ರವಿಲ್ಲದೆ ಜವಾಬ್ದಾರಿಯುತ ಸಚಿವರೊಬ್ಬರು ಇಂತಹ ಪತ್ರ ಬರೆದಿದ್ದಾರೆ. ಹಾಗಾಗಿ ಈ ಬಗ್ಗೆ ಯಾವುದೇ ಖಚಿತತೆ ಇಲ್ಲ. ಈ ಬಗ್ಗೆ ಇನ್ನಷ್ಟೆ ಮಾಹಿತಿ ಬರಬೇಕಿದೆ.
ಸಧ್ಯಕ್ಕೆ ನವದೆಹಲಿ, ಮುಂಬೈ, ಚೆನ್ನೈ, ಭುವನೇಶ್ವರ, ಲಖ್ನೌ, ಕೋಲ್ಕತ್ತಾ, ಶಿಮ್ಲಾಗಳಲ್ಲಿ ಲಲಿತಕಲಾ ಅಕಾಡೆಮಿಯ ಪ್ರಾದೇಶಿಕ ಕೇಂದ್ರಗಳಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ