Kannada NewsKarnataka NewsLatest
ಗೋಡೆ ಬಿದ್ದು ವ್ಯಕ್ತಿ ಸಾವು: ಕೆಲವೇ ಗಂಟೆಗಳಲ್ಲಿ 6 ಲಕ್ಷ ರೂ. ಚೆಕ್ ವಿತರಿಸಿದ ಗಣೇಶ ಹುಕ್ಕೇರಿ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಗೋಡೆ ಬಿದ್ದು ಮೃತನಾದ ವ್ಯಕ್ತಿಯ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಶಾಸಕ ಗಣೇಶ ಹುಕ್ಕೇರಿ ಚೆಕ್ ವಿತರಿಸಿದರು.
ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ ಮನೆ ಛಾವಣಿ ಕುಸಿದು ಬಿದ್ದು ಸದಲಗಾ ನಿವಾಸಿ ಕಲ್ಲಪ್ಪ ಪರಗೌಡ ನಿಧನರಾದರು.ಈ ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಲ್ಲದೆ,
ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ತಕ್ಷಣವೇ ಸರಕಾರದಿಂದ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿಸಿ ಚೆಕ್ ಕೂಡ ವಿತರಿಸಿದರು. ಅಲ್ಲದೆ, ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ನೀಡಿದರು.ಈ ಸಂದರ್ಭದಲ್ಲಿ ತಾಲೂಕಿನ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಸದಲಗಾ ಸಿಪಿಐ, ಪಿಎಸ್ಐ ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.




