Latest

ರೈತರಿಗೆ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಟ್ವಿಟರ್ ನಲ್ಲಿ ಒತ್ತಾಯಿಸಿದ್ದಾರೆ.

ವಾಡಿಕೆಗಿಂತ ಈ ಬಾರಿ ರಾಜ್ಯಾದ್ಯಂತ ಶೇಕಡ 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದಿದ್ದಾರೆ.

Home add -Advt

Related Articles

Back to top button