Latest

ಸಿದ್ದರಾಮಯ್ಯನವರೇ ಹಿಂದೂಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಟ್ವಿಟ್ ವಾರ್ ಮುಂದುವರೆದಿದ್ದು, ಅಯ್ಯೋ ಸಿದ್ದರಾಮಯ್ಯನವರೇ, ಹಿಂದೂಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ. ಎಸ್‍ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದವರು ಯಾರು ಎಂಬುದನ್ನು ಹಿಂದೂಗಳು ಮರೆತಿಲ್ಲ. ನೀವು ಜಾತಿ- ಧರ್ಮಗಳ ಹೆಸರಿನಲ್ಲಿ ಜನರನ್ನು ಒಡೆದು ಆಳಲು ಪ್ರಯತ್ನಿಸಿದ್ದು ಗುಟ್ಟಾಗೇನೂ ಉಳಿದಿಲ್ಲ.

ಬುದ್ದಿವಂತರ ಜಿಲ್ಲೆ ಎಂಬ ದಕ್ಷಿಣಕನ್ನಡದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, ನಳಿನ್‍ಕುಮಾರ್ ಕಟೀಲ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದರು.

Home add -Advt

ಈ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ನಳೀನ್ ಕುಮಾರ್ ಕಟೀಲ್, ಸಿದ್ದರಾಮಯ್ಯನವರೇ ಹಿಂದೂಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ ಎಂದು ತಿರುಗೇಟು ನೀಡಿದ್ದಾರೆ.

Related Articles

Back to top button