ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸೋನಿಯಾ ಗಾಂಧಿಯವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದ್ದು, ನಾಳೆ ನಡೆಯಲಿರುವ ಸಿಡಬ್ಲ್ಯೂಸಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತ ಬಳಿಕ ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಅವರು ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಸ್ಥಾನಕ್ಕೆ ಸೋನಿಯಾ ಗಾಂಧಿ ಅವರು ನೇಮಕವಾಗಿದ್ದರು. ಇದೀಗ ಕಾಂಗ್ರೆಸ್ ಬಲ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ಕಾಂಗ್ರೆಸ್ ನ 23 ಹಿರಿಯ ನಾಯಕರು ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು, ಪಕ್ಷದ ಪ್ರತಿ ಹಂತದಲ್ಲೂ ಬದಲಾವಣೆ ತರುವಂತೆ ನಾಯಕರು ಮನವಿ ಮಾಡಿದ್ದಾರೆ.
ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಅಗತ್ಯವಿದ್ದು, ಪಕ್ಷ ಸಂಘಟನೆ, ಪಕ್ಷದ ಭವಿಷ್ಯದ ದೃಷ್ಟಿಯಿಂದ ಅಧ್ಯಕ್ಷರ ಬದಲಾವಣೆ ಕುರಿತಾಗಿಯೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ನಡೆಯಲಿರುವ ಸಿಡಬ್ಲ್ಯೂಸಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ