Latest

ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ರಾಷ್ಟ್ರಪತಿ ಅಂತ್ಯಕ್ರಿಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಿನ್ನೆ ವಿಧಿವಶರಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಅಂತ್ಯಕ್ರಿಯೆಯನ್ನು ನೆರವೇರಿಸಿದರು.

ನವದೆಹಲಿಯ ಲೋಧಿ ಚಿತಾಗಾರದಲ್ಲಿ ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು. ಈ ವೇಳೆ ಸರ್ಕಾರಿ ಮತ್ತು ಮಿಲಿಟರಿ ಗೌರವಗಳನ್ನ ಅರ್ಪಿಸಲಾಯಿತು.

ಇದಕ್ಕೂ ಮುನ್ನ ರಾಜಾಜಿ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 9ರಿಂದ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ರಾಷ್ಟ್ರಪತಿ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ದೆಹಲಿ ಸಿಎಂ ಕೇಜ್ರಿವಾಲ್, ರಾಹುಲ್ ಗಾಂಧಿ, ಗುಲಾಂ ನಬೀ ಆಜಾದ್ ಅವರು ಪ್ರಣಬ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರವಾಗಿ ಕರ್ನಾಟಕದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಅಂತಿಮನಮನ ಸಲ್ಲಿಸಿದರು.

Home add -Advt

Related Articles

Back to top button