Kannada NewsKarnataka NewsLatest

ರಾಜ್ಯ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಪಾಲ್ಗೊಂಡ ಸಚಿವೆ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ,ಚಿಕ್ಕೋಡಿ-  ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಹೋಮ್ ಕ್ವಾರಂಟೈನ್ ನಲ್ಲಿರುವ  ಸಚಿವೆ ಶಶಿಕಲಾ ಜೊಲ್ಲೆ ಯಕ್ಸಂಬಾ ಸ್ವಗೃಹದಿಂದಲೇ ರಾಜ್ಯಮಟ್ಟದ ಸಭೆ ನಡೆಸಿದರು.

೨೦೨೦-೨೧ ನೇ ಸಾಲಿನಲ್ಲಿ ವಿಕಲಚೇತನರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಅರ್ಹ ವಿಕಲಚೇತನರು, ವಿಕಲಚೇತನರ ಅಭಿವೃದ್ದಿಗೆ ಶ್ರಮಿಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳನ್ನು ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಶಿಫಾರಸ್ಸು ಮಾಡಲು ಗೂಗಲ್ ಮೀಟ್ ಮೂಲಕ ರಾಜ್ಯ ಮಟ್ಟದ ಆಯ್ಕೆ ಸಮಿತಿ ಸಭೆಯನ್ನು ನಡೆಸಿ, ಅರ್ಹರನ್ನು ಆಯ್ಕೆ ಮಾಡಿದರು.
ಡಿಸೆಂಬರ ೩ ರಂದು ವಿಕಲಚೇತನರ ದಿನದ ಅಂಗವಾಗಿ ಅತ್ಯುತ್ತಮ ವ್ಯಕ್ತಿ, ಅತ್ಯುತ್ತಮ ಸಂಸ್ಥೆ, ಅತ್ಯುತ್ತಮ ಕ್ರೀಡಾಪಟು ಹೀಗೆ ೧೪ ವಿಭಾಗಗಳಲ್ಲಿ ಅಪ್ರತಿಮ ಸಾಧನೆಗೈದ ವಿಕಲಚೇತನರು, ಅವರಿಗಾಗಿ ದುಡಿಯುವ ಸಂಸ್ಥೆ ಅಥವಾ ವ್ಯಕ್ತಿಗಳನ್ನು ಗುರುತಿಸಿ, ಅವರಿಗೆ ರಾಷ್ಟ್ರಪ್ರಶಸ್ತಿ ನೀಡಲಾಗುತ್ತದೆ.
ಈ ಸಭೆಯಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಕೆ. ಲೀಲಾವತಿ, ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button