ಪ್ರಗತಿವಾಹಿನಿ ಸುದ್ದಿ, ಹುಕ್ಕೇರಿ – ಸ್ಥಳಿಯ ಶ್ರೀ ಗುರುಶಾಂತೇಶ್ವರ ಶಿಕ್ಷಣ ಸಂಸ್ಥೆಯ ವತಿಯಿಂದ ಹುಕ್ಕೇರಿ ಹಿರೇಮಠದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡುತ್ತಾ ಶಿಕ್ಷಕರ ಜವಾಬ್ದಾರಿ ಶಿಕ್ಷಕರ ಪರಿಶ್ರಮದಿಂದಾಗಿ ಇವತ್ತು ದೇಶ ನೆಮ್ಮದಿಯಿಂದಿದೆ. ಶಿಕ್ಷಕರು ನಿಜವಾದ ದೇಶದ ರಕ್ಷಕರು. ಇವತ್ತು ಸಾಕಷ್ಟು ಪರಿಶ್ರಮ ವಹಿಸಿ ಮಕ್ಕಳಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕೊರೊನಾ ಮಹಾಮಾರಿಯ ಸಂದರ್ಭದಲ್ಲಿ ಕೂಡ ಪ್ರತಿ ಹಳ್ಳಿಗೆ ಹೋಗಿ ವಿದ್ಯಾಗಮನ ಅಂದರೆ ಮಠ -ಮಂದಿರ ಗುಡಿಗುಂಡಾರಗಳಿಗೆ ಮತ್ತು ಪ್ರತಿಯೊಂದು ಮನೆಗಳಿಗೆ ಹೋಗಿ ಅಲ್ಲಿ ಮಕ್ಕಳನ್ನು ಸೇರಿಸಿ ಅವರಿಗೆ ಶಿಕ್ಷಣ ನೀಡುತ್ತಿರುವ ಶಿಕ್ಷಕ-ಶಿಕ್ಷಕರ ಪಾತ್ರ ಹಿರಿದಾದದ್ದು, ಮಕ್ಕಳಿಗಾಗಿ ಪರಿಶ್ರಮಿಸುತ್ತಿರುವ ಶಿಕ್ಷಕರ ಆರೋಗ್ಯ ಚೆನ್ನಾಗಿರಲಿ ಎಂದು ನಾವು ಪ್ರಾರ್ಥಿಸಿ ಕೊಳ್ಳುತ್ತೇವೆ ಎಂದು ಹೇಳಿದರು.
ಸಂದರ್ಭದಲ್ಲಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಶಿವಾನಂದ ಜಿನರಾಳೆ ಮತ್ತು ಗುರುಕುಲದ ಮುಖ್ಯಸ್ಥ ವಿದ್ವಾನ್ ಸಂಪತ್ತಕುಮಾರ ಶಾಸ್ತ್ರಿಗಳು ಹಾಗೂ ಶಾಲೆಯ ಎಲ್ಲಾ ಶಿಕ್ಷಕಿ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕ, ಶಿಕ್ಷಕಿಯರನ್ನು ಗೌರವಿಸಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ