Latest

ಬಾಲಿವುಡ್ ನಟ ಅರ್ಜುನ್ ಕಪೂರ್ ಗೂ ಒಕ್ಕರಿಸಿದ ಕೊರೊನಾ

ಪ್ರಗತಿವಾಹಿನಿ ಸುದ್ದಿ; ಮುಂಬೈ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರಾಜಕೀಯ ಗಣ್ಯರು, ಸೆಲೆಬ್ರಿಟಿಗಳು ಕೂಡ ಸೋಂಕಿನಿಂದ ಬಳಲುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಅರ್ಜುನ್ ಕಪೂರ್ ಅವರಿಗೂ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ.

ಈ ಕುರಿತು ಸ್ವತ: ಅರ್ಜುನ್ ಕಪೂರ್ ಮಾಹಿತಿ ನೀಡಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಹೋಂ ಐಸೋಲೇಶನ್ ನಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

ಸದ್ಯ ನಾನು ಆರೋಗ್ಯವಾಗಿದ್ದು, ಕೆಲ ಕೊರೊನ ಗುಣಲಕ್ಷಣಗಳು ಕಾಣಿಸಿಕೊಂಡಿವೆ. ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಶನ್ ನಲ್ಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನಿಮ್ಮ ಬೆಂಬಲಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ಮುಂದಿನ ದಿನಗಳಲ್ಲಿ ಆರೋಗ್ಯದ ಅಪ್‍ಡೇಟ್ ನೀಡುತ್ತಿರುತ್ತೇನೆ ಎಂದು ಹೇಳಿದ್ದಾರೆ.

Related Articles

Back to top button