Latest

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಕೇಸ್; ನ್ಯಾಯಾಧೀಶರ ಮುಂದೆ ಹಾಜರಾಗಲಿರುವ ನಟಿ ರಾಗಿಣಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ಸಿಸಿಬಿಯಿಂದ ಬಂಧನಕ್ಕೀಡಾಗಿರುವ ನಟಿ ರಾಗಿಣಿ ದ್ವೇವೆದಿಯವರ ಸಿಸಿಬಿ ಕಷ್ಟಡಿ ಇಂದು ಮುಕ್ತಾಯವಾಗಲಿದ್ದು ಈ ಹಿನ್ನಲೆಯಲ್ಲಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ ನಡೆಸಲಾಗಿದೆ.

ಈಗಾಗಲೇ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ನಟಿ ರಾಗಿಣಿ ಅವರನ್ನು ಇಂದು ಮಧ್ಯಾಹ್ನ 1 ಗಂಟೆಗೆ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆಯಿದೆ.

Home add -Advt

ಈ ವೇಳೆ ರಾಗಿಣಿಯವರನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸುವ ನಿಟ್ಟಿನಲ್ಲಿ ಸಿಸಿಬಿ ಅಧಿಕಾರಿಗಳು ತಮ್ಮ ಕಸ್ಟಗಿ ವಹಿಸುವಂತೆ ಕೋರುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನು ಇದೇ ಪ್ರಕರಣದಲ್ಲಿ ಬಂಧನದಲ್ಲಿರುವ ಇನ್ನಿಬ್ಬರು ಆರೋಪಿಗಳಾದ ರವಿಶಂಕರ್ ಹಾಗೂ ವಿರೇನ್ ಖನ್ನಾರನ್ನು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

Related Articles

Back to top button