ಪ್ರಗತಿವಾಹಿನಿ ಸುದ್ದಿ;ಬೆಂಗಳೂರು: ಕೊವಿಡ್ ಕಾರಣದಿಂದಾಗಿ ಈ ಬಾರಿ ಮೈಸೂರು ದಸರಾ ಆಚರಣೆ ತುಂಬಾ ಸರಳವಾಗಿ ಆಚರಿಸಲಾಗುತ್ತಿದ್ದು, ವೈಭವಯುತ ಮೆರವಣಿಗೆ, ಯುವ ದಸರಾ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲಾಗುತ್ತಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ನಡೆದ ದಸರಾ ಉನ್ನತ ಮಟ್ಟದ ಸಭೆಯಲ್ಲಿ ದಸರಾ ರೂಪುರೇಷೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಬಾರಿಯ ದಸರಾ ಚಾಮುಂಡಿ ಬೆಟ್ಟ ಹಾಗೂ ಮೈಸೂರು ಅರಮನೆಗೆ ಮಾತ್ರ ಸೀಮಿತವಾಗಿರುವಂತೆ ಹಾಗೂ ಹೆಚ್ಚಿನ ಜನ ಸೇರದಂತೆ ಸಾಂಕೇತಿಕವಾಗಿ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದರು.
ಈ ಬಾರಿ ದಸರಾ ಆಚರಣೆಗಾಗಿ ಸರ್ಕಾರದಿಂದ 10 ಕೋಟಿ ರೂ ಬಿಡುಗಡೆ ಮಾಡಲಾಗುತ್ತಿದ್ದು, ಈ ಬಾರಿ ದಸರಾ ಮಹೋತ್ಸವದಲ್ಲಿ ಯುವ ದಸರಾ, ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ ಹಾಗೂ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಿರಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಪ್ರಮುಖವಾಗಿ ಈ ಬಾರಿಯ ಜಂಬೂ ಸವಾರಿ ಅರಮನೆ ಒಳಗೆ ಮಾತ್ರ ಇರುತ್ತದೆ. ಜೊತೆಗೆ ಈ ಬಾರಿಯ ನಾಡಹಬ್ಬ ದಸರಾವನ್ನು ವಿಶೇಷವಾಗಿ ಕೊರೋನಾ ವಾರಿಯರ್ಸ್ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ