Latest

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ಕೇಸ್; ಆರೋಪಿಗಳಿಗೆ ನಡುಕ ಹುಟ್ಟಿಸಿದ ಇಡಿ ಎಂಟ್ರಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ನಂಟು ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಪ್ರಕರಣದಲ್ಲಿ ಎಂಟ್ರಿಕೊಟ್ಟಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣ ಸಂಬಂಧ ಈಗಾಗಲೇ ಸಿಸಿಬಿ ಅಧಿಕಾರಿಗಳು ಆರೋಪಿಗಳಾದ ರವಿಶಂಕರ್, ವಿರೇನ್ ಖನ್ನಾ, ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಡ್ರಗ್ ಕಿಂಗ್ ಪಿನ್ ವಿರೇನ್ ಖನ್ನಾ ವಿಚಾರಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ವಿರೇನ್ ಖನ್ನಾ ನಿವಾಸದ ಮೇಲೆ ದಾಳಿ ನಡೆಸಿದಾಗ ಅಲ್ಲಿ 8 ದೇಶಗಳ ಕರೆನ್ಸಿ ಪತ್ತೆಯಾಗಿತ್ತು. ಅಲ್ಲದೇ ಹವಾಲಾ ಹಣದ ನಂಟು ಇರುವ ಬಗ್ಗೆಯೂ ಮಾಹಿತಿ ಸಿಕ್ಕಿತ್ತು. ಇದೀಗ ವಿರೇನ್ ಖನ್ನಾನನ್ನು ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ಇದೇ ವೇಳೆ ಬೆಂಗಳೂರಿನ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಇಡಿ ಸಹಾಯಕ ನಿರ್ದೇಶಕ ಬಸವರಾಜ್ ನೇತೃತ್ವದ ತಂಡ ಭೇಟಿ ನೀಡಿದೆ.

ಡ್ರಗ್ಸ್ ಮಾಫಿಯಾ ಹಾಗೂ ಅಕ್ರಮ ಹಣ ವರ್ಗಾವಣೆ ಕುರಿತು ಸಿಸಿಬಿ ಅಧಿಕಾರಿಗಳಿಂದ ಇಡಿ ಮಾಹಿತಿ ಪಡೆದುಕೊಂಡಿದ್ದು, ಆರೋಪಿ ವಿರೇನ್ ಖನ್ನಾನನ್ನು ಇಡಿ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button