Latest

ದೇಶದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 96,551 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 45.62,415ಕ್ಕೆ ಏರಿಕೆ ಆಗಿದೆ.

ಕಳೆದ 24 ಗಂಟೆಯಲ್ಲಿ 1,209 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ 76,271 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ನಿನ್ನೆ 11.63,542 ಮಂದಿಯನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಈ ಮೂಲಕ ಇದುವರೆಗೂ 5,40,97,975 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button