Latest

ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಜಾ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಸಂಬಂಧ ಬಂಧನದಲ್ಲಿದ್ದ ಗೆಳತಿ ರಿಯಾ ಚಕ್ರವರ್ತಿಯ ಜಾಮೀನು ಅರ್ಜಿಯನ್ನು ಮುಂಬೈ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.

ಸುಶಾಂತ್ ಆತ್ಮಹತ್ಯೆ ಪ್ರಕರಣದಲ್ಲಿ ಡ್ರಗ್ಸ್ ನಂಟು ಇರುವ ಆರೋಪ ಕೂಡ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ರಿಯಾ ಚಕ್ರವರ್ತಿ ಹಾಗೂ ಸಹೋದರ ಶೋವಿಕ್ ಚಕ್ರವರ್ತಿಯನ್ನು ಎನ್‍ಸಿಬಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ಆಕೆ ಸ್ಥಳೀಯ ಕೋರ್ಟಿನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಳು ಅದು ಕೂಡ ವಜಾಗೊಂಡಿತ್ತು. ಬಳಿಕ ಮತ್ತೆ ಮುಂಬೈ ಕೋರ್ಟಿಗೆ ಆಕೆ ಅರ್ಜಿ ಸಲ್ಲಿಸಿದ್ದಳು.

Home add -Advt

ಅರ್ಜಿ ವಿಚಾರಣೆ ವೇಳೆ ರಿಯಾ ನನ್ನನ್ನು ಹೆದರಿಸಿ ತಪ್ಪೊಪ್ಪಿಕೊಳ್ಳುವಂತೆ ಒತ್ತಾಯಿಸಲಾಗಿದೆ. ಇದೆಲ್ಲವೂ ನನ್ನ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ.

ಆದರೆ ಎನ್‍ಸಿಬಿ ಪರ ವಕೀಲರು, ರಿಯಾ ತಾನು ತಪ್ಪು ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಈಕೆಗೆ ಜಾಮೀನು ನೀಡಿದರೆ ಸಾಕ್ಷಿ ನಾಶ ಮಾಡುವ ಸಾಧ್ಯತೆ ಇದೆ. ಹೀಗಾಗಿ ತನಿಖೆ ಮುಗಿಯುವವರೆಗೆ ಆಕೆ ನ್ಯಾಯಾಂಗ ಬಂಧನದಲ್ಲಿರುವುದು ಸೂಕ್ತ ಎಂದು ವಾದ ಮಂಡಿಸಿದ್ದಾರೆ. ಅಂತಿಮವಾಗಿ ನ್ಯಾಯಾಲಯ ರಿಯಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

Related Articles

Back to top button