Latest

ಡ್ರಗ್ಸ್ ಮಾಫಿಯಾ ಕೇಸ್; ಚಿನ್ನದ ವ್ಯಾಪಾರಿ ಪುತ್ರ ಸಿಸಿಬಿ ಬಲೆಗೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಇನ್ನೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೊರೊನಾ ಸೋಂಕು ಇರುವುದಾಗಿ ಹೇಳಿ ವಿಚಾರಣೆಯಿಂದ ತಪ್ಪಿಸಿಕೊಡಿದ್ದ ಆರೋಪಿ ವೈಭವ್ ಜೈನ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಡ್ರಗ್ ಪ್ರಕರಣದ ಐದನೇ ಆರೋಪಿಯಾಗಿರುವ ಈತ ಬೆಂಗಳೂರಿನ ಚಿನ್ನದ ವ್ಯಾಪಾರಿಯ ಮಗ. ಆರೋಪಿ ರವಿಶಂಕರ್ ಹೇಳಿಕೆಯನ್ನು ಆಧರಿಸಿ ಇಂದು ವೈಭವ್ ಜೈನ್​ನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Home add -Advt

ವೈಭವ್ ಜೈನ್ ಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟೀಸ್ ನೀಡುತ್ತಿದ್ದಂತೆಯೇ ತನಗೆ ಕೊರೋನಾ ಇದೆ, ನಾನು ಕ್ವಾರಂಟೈನ್‌ನಲ್ಲಿದ್ದೇನೆ ಎಂದು ಹೇಳುವ ಮೂಲಕ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದ. ಈ ಹಿನ್ನಲೆಯಲ್ಲಿ ವೈಯ್ಯಾಲಿಕಾವಲ್ ನಿವಾಸದ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ವೈಭವ್ ನನ್ನು ಬಂಧಿಸಿದ್ದಾರೆ.

Related Articles

Back to top button