ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಧಾರವಾಡದ ಕೇಂದ್ರ ಸರಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಬೆಳಗಾವಿ ಮನಪಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬಸವನ ಕುಡಚಿಯ ಕಲ್ಮೇಶ್ವರ ಬಸವೇಶ್ವರ ಮಂದಿರದಲ್ಲಿ ಸ್ವಚ್ಛ ಭಾರತ ಮಿಷನ್ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಅನಿಲ ಬೆನಕೆ, ಶೌಚಾಲಯ ಬಳಕೆ ಮಾಡುವುದರಿಂದ, ಹಸಿ ಮತ್ತು ಒಣ ಕಸ ವಿಂಗಡಣೆ ಮಾಡುವುದರಿಂದ ಹಾಗೂ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಮಿತಗೊಳಿಸಿದಲ್ಲಿ ಸ್ವಚ್ಛ ಭಾರತ ನಿರ್ಮಾಣ ಸಾಧ್ಯವಾಗಲಿದ್ದು ಈ ಮೂಲಕ ಭೂಮಿಯನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಿದಂತಾಗುತ್ತದೆ ಎಂದರು.
ಮುಖ್ಯ ಅತಿಥಿ ಎಪಿಎಂಸಿ ನಿರ್ದೇಶಕ ಪ್ರಮೋದ ಪಾಟೀಲ ಮಾತನಾಡಿ, ಬಸವನ ಕುಡಚಿ ಜನತೆ ಸ್ವಚ್ಛತೆಯನ್ನು ಗಂಭೀರವಾಗಿ ಪರಿಗಣಿಸಿ ಅದರ ಯಶಸ್ಸಿಗೆ ಸಹಕರಿಸಬೇಕೆಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಸಹಾಯಕ ತೋಟಗಾರಿಕಾ ಅಧಿಕಾರಿ ಉದಯಕುಮಾರ ಕದಂ, ಜಿಪಂ ಸಮಾಲೋಚಕ ಪರಗೌಡ ಪಾಟೀಲ ಮಾತನಾಡಿದರು.
ನಗರ ಸೇವಕಿ ಶ್ರೀಯಲಾ ಬಿ. ಜನಗೌಡಾ ಅಧ್ಯಕ್ಷತೆ ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಫ್.ಬಿ. ನದಾಫ್, ಕ್ಷೇತ್ರ ಜನ ಸಂಪರ್ಕ ಪ್ರಚಾರ ಅಧಿಕಾರಿ ಜಿ. ತುಕಾರಾಮಗೌಡ, ಸ್ಥಳೀಯ ಮುಖಂಡರು ಇದ್ದರು. ವಿದ್ಯಾರ್ಥಿಗಳಿಂದ ಪ್ರಮುಖ ಬೀದಿಗಳಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಜಾಥಾ ನಡೆಯಿತು.
(ಪ್ರಗತಿವಾಹಿನಿ ಸುದ್ದಿಗಳನ್ನು ಪರಿಚಿತರಿಗೆ ಶೇರ್ ಮಾಡಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ